April 18, 2026
IMG-20260127-WA0033

ಕೊಪ್ಪಳ:ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ  ಸಮಾಜಮುಖಿ ಯುವ ನಾಯಕ ಕುರುಗೋಡ ರವಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಜಿಲ್ಲಾ ಘಟಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ರಮೇಶ್ ಬಾಬು ತಿಳಿಸಿದ್ದಾರೆ.

ಪಕ್ಷ ಸಂಘಟನೆ, ಜನಸಂಪರ್ಕ ಹಾಗೂ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕುರುಗೋಡ ರವಿ, ಕಾಂಗ್ರೆಸ್‌ನ ತತ್ವ-ನೀತಿಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ಪಕ್ಷದ ಅಭಿಪ್ರಾಯಗಳನ್ನು ಮಾಧ್ಯಮಗಳ ಮೂಲಕ ಸ್ಪಷ್ಟವಾಗಿ ಜನರಿಗೆ ತಿಳಿಸುವ ಜವಾಬ್ದಾರಿ ಅವರಿಗೆ ನೀಡಲಾಗಿದೆ.

ನೇಮಕಕ್ಕೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಾಂಗ್ರೆಸ್ ಮುಖಂಡರು ಹರ್ಷ ವ್ಯಕ್ತಪಡಿಸಿದ್ದು, “ಪಕ್ಷದ ನಿಲುವುಗಳನ್ನು ಬಲವಾಗಿ ಪ್ರತಿಪಾದಿಸುವಲ್ಲಿ ಕುರುಗೋಡ ರವಿ ಯಶಸ್ವಿಯಾಗುತ್ತಾರೆ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *