June 2, 2026
01-614-RASHI.jpg

ಕೊಪ್ಪಳ, ಏಪ್ರಿಲ್ 25: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಕೊಪ್ಪಳ ಇದರ ವಿದ್ಯಾರ್ಥಿಗಳು ಮಾರ್ಚ್ 2026ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆಗೈದಿದ್ದಾರೆ.

ಒಟ್ಟು 115 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 36 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ವರ್ಗದಲ್ಲಿ, 25 ವಿದ್ಯಾರ್ಥಿಗಳು ದ್ವಿತೀಯ ವರ್ಗದಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶಾಲೆಯು ಶೇಕಡಾ 98% ಫಲಿತಾಂಶ ದಾಖಲಿಸಿದೆ.

    625ಕ್ಕೆ 614 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದ ಕುಮಾರಿ ರಾಷಿ ಲಕ್ಷ್ಮಪ್ಪ ಹಾದಿಮನಿ ಹಾಗೂ 611 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದ ಕುಮಾರ ಪ್ರೀತಮ್ ಅಚ್ಯುತ ಗುಡ್ಲಾನೂರ ಇವರ ಸಾಧನೆ ವಿಶೇಷವಾಗಿರುತ್ತದೆ.

    ಈ ಸಾಧನೆಗಾಗಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸರ್ವ ಸದಸ್ಯರು, ಪ್ರಾಚಾರ್ಯರಾದ ಶ್ರೀಮತಿ ವೈ. ಪದ್ಮಜಾ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗವು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *