June 2, 2026

ಕೊಪ್ಪಳ : ತ್ಯಾಗ ಮತ್ತು ಬಲಿದಾನದ ಸಂಕೇತವಾದ ಪವಿತ್ರ ಬಕ್ರೀದ್ ಹಬ್ಬ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಕೆಎಂಎಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಕೆ.ಎಂ. ಸೈಯದ್ ಹೇಳಿದರು.
     ಅವರು ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ನಂತರ ಮಾತನಾಡಿ ಬಕ್ರೀದ್ ಹಬ್ಬವನ್ನು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಗುತ್ತಿದೆ, ದೇವರು ಎಲ್ಲರಿಗೆ ಒಳ್ಳೆಯದು ಮಾಡಲಿ ಎಂದರು.
ನಂತರ ಬಕ್ರೀದ್ ಹಬ್ಬದ ನಿಮಿತ್ತ ಪರಸ್ಪರ ಶುಭಾಶಯಗಳು ಎನಿಮಯ ಮಾಡಿಕೊಂಡರು. ಮುಂಜಾನೆಯಿಂದಲೇ ಈದ್ಗಾ ಮೈದಾನಕ್ಕೆ ಆಗಮಿಸಿದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ, ಜೆಡಿಎಸ್ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ ಚಂದ್ರಶೇಖರ್, ಕೊಪ್ಪಳ ನಗರ ಪ್ರಾಧಿಕಾರ ಅಧ್ಯಕ್ಷ ಪ್ರಸನ್ನ ಗಡಾದ್, ಕೊಪ್ಪಳ ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಡಾ. ಮಹೇಶ್ ಗೊವನ್ ಕೊಪ್ಪ, ಕಾಂಗ್ರೆಸ್ ಪಕ್ಷದ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಕಾಟನ್ ಪಾಷ, ನಗರಸಭೆ ಮಾಜಿ ಸದಸ್ಯರಾದ ಮಾನವಿ ಪಾಶ, ಖಾಜಾವಲಿ ಬನ್ನಿ ಕೊಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *