June 2, 2026
IMG_20260601_190548

ಕೊಪ್ಪಳ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಸಿದ್ದರಾಮಯ್ಯನವರ ಮಾನಸ ಪುತ್ರ, ಹ್ಯಾಟ್ರಿಕ್ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಕೊಪ್ಪಳ ನಗರ ಪ್ರಾಧಿಕಾರ ಸದಸ್ಯ ಅಜ್ಜಪ್ಪಸ್ವಾಮಿ ಚೆನ್ನ ಒಡೆಯರ ಮಠ ಅವರು ಒತ್ತಾಯಿಸಿದ್ದಾರೆ.
ಈ ಬಾರಿ ನೂತನ ಸಚಿವ ಸಂಪುಟದಲ್ಲಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ರಾಜಕೀಯ ವಲಯದಲ್ಲಿ ಕೇಳಿಬಂದಿವೆ.
ಕೊಪ್ಪಳ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನ ಶಾಸಕ ರಾಘವೇಂದ್ರ ಹಿಟ್ನಾಳ್ ನಿರ್ಮಿಸಿದ್ದಾರೆ.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಕುರುಬ ಸಮಾಜಕ್ಕೆ ಸೇರಿದವರಾಗಿದ್ದು, ಕಲ್ಯಾಣ ಕರ್ನಾಟಕ ಹಾಗೂ ಕೊಪ್ಪಳ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದಾರೆ.
        ಸಿದ್ದರಾಮಯ್ಯನವರ ಮಾನಸ ಪುತ್ರ, ಸಿದ್ದರಾಮಯ್ಯನವರ ಆಪ್ತ ಬಣದ ವಲಯದಲ್ಲಿ ಶಾಸಕರಾದ ರಾಘವೇಂದ್ರ ಹಿಟ್ನಾಳ ಗುರುತಿಸಿಕೊಂಡಿರುವುದು ಇದು ಪ್ಲಸ್ ಪಾಯಿಂಟ್ ಕೊಪ್ಪಳ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂಬ ಒತ್ತಡ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮೇಲಿದ್ದು, ಸಚಿವ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವರ ಹೆಸರು ಸಚಿವ ಸ್ಥಾನದ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಸಚಿವ ಸಂಪುಟದಲ್ಲಿ ಹೈಕಮಾಂಡ್ ಶಾಸಕ ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಕೊಪ್ಪಳ ನಗರ ಪ್ರಾಧಿಕಾರ ಸದಸ್ಯ ಅಜ್ಜಪ್ಪಸ್ವಾಮಿ ಚೆನ್ನವಡೆಯರ ಮಠ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *