ಸಮೂಹವು ಪ್ರತಿವರ್ಷ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಹಾಗೂ ಅವುಗಳ ಪಾಲನೆ-ಪೋಷಣೆ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳುತ್ತಿದೆ. ಕಳೆದ 20 ವರ್ಷಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದ್ದು, ಈ ವರ್ಷ ಹೊಸಪೇಟೆ, ಸಂಡೂರು, ಕೊಪ್ಪಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ 5 ಸಾವಿರ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.
. ವಾಣಿಜ್ಯ ತೆರಿಗೆ ನಿರೀಕ್ಷಕ ಹುಸೇನ್ ಸಾಬ್, ಮಾತನಾಡಿ“ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಸಸಿ ನೆಡುವುದಷ್ಟೇ ಅಲ್ಲ, ಅವುಗಳ ಸಂರಕ್ಷಣೆ ಮತ್ತು ಪಾಲನೆಗೂ ಹೆಚ್ಚಿನ ಮಹತ್ವ ನೀಡಬೇಕು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಬಲ್ದೋಟ ಸಮೂಹ ಕೈಗೊಂಡಿರುವ ಈ ಮಹತ್ವದ ಕಾರ್ಯಕ್ಕೆ ಸಾರ್ವಜನಿಕರು ಸಹ ಬೆಂಬಲ ನೀಡಬೇಕು” ಎಂದು ಕರೆ ನೀಡಿದರು.