ಕೊಪ್ಪಳ: ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಿಗೇರಿ ಭಾನುವಾರದಂದು ಹಲಗೇರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬೂತ್ ನಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೊಟ್ರಯ್ಯ ಹಿರೇಮಠ ಮತ್ತು ಆಶಾ ಕಾರ್ಯಕರ್ತೆ ಜ್ಯೋತಿ ಹೊಸಂಗಡಿ, ಆರೋಗ್ಯ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.