July 28, 2026
IMG_20260709_163107

ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಭಿವೃದ್ಧಿಗೆ ಆದ್ಯತೆ: ಹನುಮೇಶ ಮುರಡಿ
ಕೊಪ್ಪಳ: ಜಿಲ್ಲಾ ವಕೀಲರ ಸಂಘದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಹಿರಿಯ ಕಿರಿಯ ವಕೀಲರ ಸಲಹೆ ಸೂಚನೆ ಮೇರೆಗೆ ಮೊದಲ ಆದ್ಯತೆ ನೀಡವೆ ಎಂದು ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಹನುಮೇಶ ಮುರಡಿ ಹೇಳಿದರು.
ಅವರು ಗುರುವಾರದಂದು ನಗರದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಕೀಲರ ವೃತ್ತಿಪರ ಹಿತಾಸಕ್ತಿಯನ್ನು ಕಾಪಾಡುವ ಜೊತೆಗೆ ಸಂಘದ ಮೂಲಸೌಕರ್ಯ ಅಭಿವೃದ್ಧಿ, ಸದಸ್ಯರಿಗೆ ಅಗತ್ಯ ಸೌಲಭ್ಯಗಳು ಹಾಗೂ ಯುವ ವಕೀಲರಿಗೆ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ ಅವರು ಸಂಘದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಾರದರ್ಶಕ ಹಾಗೂ ಸಮನ್ವಯದ ಆಡಳಿತ ನಡೆಸಲಾಗುವುದು. ಹಿರಿಯ ಮತ್ತು ಕಿರಿಯ ವಕೀಲರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಮೂಲಕ ಸಂಘವನ್ನು ಇನ್ನಷ್ಟು ಸದೃಢಗೊಳಿಸುವ ಗುರಿ ಹೊಂದಲಾಗಿದೆ ಎಂದು ಅವರು
ಜಿಲ್ಲಾ ವಕೀಲರ ಸಂಘದ ಏಳಿಗೆಗೆ ಪ್ರತಿಯೊಬ್ಬ ಸದಸ್ಯರ ಸಹಕಾರ ಅಗತ್ಯವಾಗಿದೆ. ಎಲ್ಲರ ಸಲಹೆ ಮತ್ತು ಸಹಕಾರದೊಂದಿಗೆ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹನುಮೇಶ ಮುರಡಿ ಹೇಳಿದರು.
ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯವಾದಿ
ಎ.ವಿ ಕಣವಿ ಮಾತನಾಡಿ ಹಿರಿಯ ನ್ಯಾಯವಾದಿ ಹನುಮೇಶ ಮುರುಡಿ 2019-2021 ಎರಡು ವರ್ಷದ ಅವಧಿಯಲ್ಲಿ ವಕೀಲರ ಸಂಘದ ಅಭಿವೃದ್ಧಿಗೆ ಸಾಕಷ್ಟು ಉತ್ತಮ ಕಾರ್ಯಗಳನ್ನು ನಿರ್ವಹಿಸಿದ್ದು ಈ ಬಾರಿ ಅಭಿವೃದ್ಧಿಗೆ ಮತ್ತು ಸೇವೆ ಮಾಡಲು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಂದಾನಗೌಡ ಎಸ್. ಮಾಲಿ ಪಾಟೀಲ್, ಪ್ರಧಾನ ಕಾರ್ಯದರ್ಶಿ ಸ್ಥಾನದ ಅಭ್ಯರ್ಥಿ ಚಿದಾನಂದ ಗೌಡ ಪೊಲೀಸ್ ಪಾಟೀಲ್, ಜಂಟಿ ಕಾರ್ಯದರ್ಶಿ ಸ್ಥಾನದ ಅಭ್ಯರ್ಥಿ ಬಸವರಾಜ್ ಮೇಲು ಸಕ್ರಿ, ಖಜಾಂಚಿ ಸ್ಥಾನದ ಅಭ್ಯರ್ಥಿ ವೀಣಾ ವಾಲ್ಮೀಕಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಭಿವೃದ್ಧಿಗೆ ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಮತ್ತು ಕಿರಿಯ ವಕೀಲರು ಉಪಸ್ಥಿತರಿದ್ದರು.

ಕೊಪ್ಪಳ ಜಿಲ್ಲಾ ಅಭಿವೃದ್ಧಿಗೂ ಶ್ರಮಿಸುವೆ :

    ವಕೀಲರ ಸಂಘ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕೊಪ್ಪಳ ಜಿಲ್ಲೆಯ ಮೂಲಭೂತ ಸಮಸ್ಯೆಗಳು ಹಾಗೂ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ಪತ್ರಕರ್ತರ ಪ್ರಶ್ನೆಗೆ ಕೊಪ್ಪಳ ಜಿಲ್ಲೆಯ ಮೂಲಭೂತ ಸಮಸ್ಯೆ ಅಭಿವೃದ್ಧಿ ವಿಷಯ ಸೇರಿದಂತೆ ಎಲ್ಲಾ ಹೋರಾಟಗಳಲ್ಲಿ ವಕೀಲರ ಸಂಘ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದೇವೆ ಮುಂಬರುವ ದಿನಗಳಲ್ಲಿ ಅಭಿವೃದ್ಧಿಗಾಗಿ ಶ್ರಮಿಸಿ ಜನಪ್ರತಿನಿಧಿಗಳು ಸರಕಾರದ ಗಮನಹರಿಸುವುದಾಗಿ ಹೇಳಿದರು.

Leave a Reply

Your email address will not be published. Required fields are marked *