ಕೊಪ್ಪಳ: ಪಟ್ಟಣ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಮೇಶ್ ಹ್ಯಾಟಿ ಅವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಗಾಂಧೀಜಿಯವರ ತತ್ವ, ಆದರ್ಶ, ಅಹಿಂಸೆ ಮತ್ತು ಸ್ವಚ್ಛತೆಯ ಸಂದೇಶವನ್ನು ಸ್ಮರಿಸಿದರು,ಕಾರ್ಯಕ್ರಮದ ಅಂಗವಾಗಿ ಸ್ವಚ್ಛತೆ, ಶಿಸ್ತು ಮತ್ತು ಸಾರ್ವಜನಿಕ ಸೇವೆಯ ಮಹತ್ವದ ಕುರಿತು ಸಿಬ್ಬಂದಿಗೆ ಸಂದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಹೊನ್ನೂರಸಾಬ ಬೈರಾಪುರ, ಸರ್ವ ಸದಸ್ಯರು ಹಾಗೂ ಮುಖ್ಯಾಧಿಕಾರಿ ಸುರೇಶ್ ಬಬಲಾದ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
