ಬಿ.ವೈ. ವಿಜಯೇಂದ್ರ ಜೊತೆ ಸುದೀರ್ಘ ಚರ್ಚೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೆ ಸಿದ್ಧತೆ ಎಂಬ ಮಾಹಿತಿ !
ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯ ಸುಳಿವು ಲಭ್ಯವಾಗಿದ್ದು, ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷರು ಹಾಗೂ ಸಕಾ೯ರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಜಿಲ್ಲಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಶಂಭುಲಿಂಗನಗೌಡ ಪಾಟೀಲ್ ಹಲಿಗೇರಿ ಅವರು ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಮಾತುಕತೆಯ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದೆ.
ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಅಕ್ಟೋಬರ್ 12ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶಂಭುಲಿಂಗನಗೌಡ ಪಾಟೀಲ್ ಅವರು ಅಂದು ರಾಜ್ಯಕ್ಕೆ ಬಿಜೆಪಿ ಉಸ್ತುವಾರಿಗಳು ಆಗಮಿಸುತ್ತಿದ್ದು ಅಂದೇ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ, ಈ ಕುರಿತು ಬಿಜೆಪಿ ನಾಯಕರು ಅಥವಾ ಶಂಭುಲಿಂಗನಗೌಡ ಪಾಟೀಲ್ ಅವರಿಂದ ಅಧಿಕೃತ ಸೇರ್ಪಡೆ ಬಗ್ಗೆ ಸ್ಪಷ್ಟವಾಗಬೇಕಿದೆ.
ಶಿಕ್ಷಕರ ವಲಯದಿಂದ ರಾಜಕೀಯ ಅಂಗಳಕ್ಕೆ?
ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿ ಹಾಗೂ 3 ಬಾರಿ ಸಕಾ೯ರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಶಂಭುಲಿಂಗನಗೌಡ ಪಾಟೀಲ್ ಅವರು ಸಕಾ೯ರಿ ನೌರರರ ಶಿಕ್ಷಕರ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯ ಕುರಿತ ಚರ್ಚೆ ಆರಂಭವಾಗಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ಈಗ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇರುವುದರಿಂದ ಬಿಜೆಪಿ ಅಭ್ಯರ್ಥಿ ಶಶಿಲ್ ನಾಮೋಶಿಗೆ ಆನೆ ಬಲ ಬಂದಂತಾಗುವುದು,ಹಾಗೂ ಕೊಪ್ಪಳ ಬಿಜೆಪಿಗೆ ಒಂದು ದೊಡ್ಡ ಶಕ್ತಿ ಬಂದಂಗ ಆಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ
ಸಕಾ೯ರಿ ನೌಕರರ ಹಾಗೂ ಶಿಕ್ಷಕರ ಸಂಘಟನೆಯ ಅನುಭವವನ್ನು ರಾಜಕೀಯ ಕ್ಷೇತ್ರದಲ್ಲಿ ಬಳಸಿಕೊಳ್ಳುವ ಉದ್ದೇಶದಿಂದ ಅವರು ಹೊಸ ರಾಜಕೀಯ ಹೆಜ್ಜೆ ಇಡುತ್ತಿದ್ದಾರೆಯೇ ಎಂಬ ಪ್ರಶ್ನೆಯೂ ಮೂಡಿದೆ. ಆದರೆ, ಅವರ ರಾಜಕೀಯ ಉದ್ದೇಶಗಳು ಹಾಗೂ ಮುಂದಿನ ಕಾರ್ಯತಂತ್ರದ ಕುರಿತು ಅಧಿಕೃತ ಮಾಹಿತಿ ಲಭ್ಯವಾದ ಬಳಿಕವಷ್ಟೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ವಿಜಯೇಂದ್ರ ಜೊತೆಗಿನ ಮಾತುಕತೆ ಕುತೂಹಲಕ್ಕೆ ಕಾರಣ
ಬಿ.ವೈ. ವಿಜಯೇಂದ್ರ ಅವರೊಂದಿಗೆ ನಡೆದಿರುವುದಾಗಿ ಹೇಳಲಾಗುತ್ತಿರುವ ಸುದೀರ್ಘ ಚರ್ಚೆಯೇ ಈ ಬೆಳವಣಿಗೆಗೆ ಪ್ರಮುಖ ಕಾರಣವಾಗಿದೆ. ಈ ಮಾತುಕತೆಯ ಫಲವಾಗಿ ಪಕ್ಷ ಸೇರ್ಪಡೆಗೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳಲಾಗಿದೆಯೇ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಒಂದು ವೇಳೆ ಶಂಭುಲಿಂಗನಗೌಡ ಪಾಟೀಲ್ ಅವರು ಬಿಜೆಪಿಗೆ ಸೇರ್ಪಡೆಯಾದರೆ, ಸಕಾ೯ರಿ ನೌಕರರ ಸಂಘಟನೆ ಹಾಗೂ ಶಿಕ್ಷಕರ ಸಂಘಟನೆಯ ಹಿನ್ನೆಲೆಯಿಂದ ಬಂದಿರುವ ಅವರ ಮುಂದಿನ ರಾಜಕೀಯ ನಡೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಗಮನ ಸೆಳೆಯಲಿದೆ.
ಅಕ್ಟೋಬರ್ 12ರತ್ತ ರಾಜಕೀಯ ಚಿತ್ತ
ಸದ್ಯ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಅಕ್ಟೋಬರ್ 12ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಪಕ್ಷ ಸೇರ್ಪಡೆ ಬಹುತೇಕ ಖಚಿತ ಶಂಭುಲಿಂಗನಗೌಡ ಪಾಟೀಲ್ ಅವರ ಬಿಜೆಪಿ ಸೇರ್ಪಡೆಯ ಕುರಿತ ಸುದ್ದಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಅಕ್ಟೋಬರ್ 12ರಂದು ಈ ಬೆಳವಣಿಗೆಗೆ ಬಿಜೆಪಿ ಸೇರ್ಪಡೆಯಿಂದ ಅಧಿಕೃತ ಮುದ್ರೆ ಬೀಳುತ್ತದೆ.
