June 3, 2025
IMG_20250518_092838

ಕೊಪ್ಪಳ : ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷ ಹಿನ್ನೆಲೆಯಲ್ಲಿ ಪಕ್ಕದ ಜಿಲ್ಲೆ ವಿಜಯನಗರದಲ್ಲಿ ಬೃಹತ್ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಕೊಪ್ಪಳ ಮತಕ್ಷೇತ್ರದಿಂದ 10 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಕೆ.ಎಂ.ಸೈಯದ್ ತಿಳಿಸಿದ್ದಾರೆ.
ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಮುಖ್ಯಮಂತ್ರಿಗಳು ಸಚಿವ ಸಂಪುಟದ ಎಲ್ಲಾ ಸದಸ್ಯರುಗಳು ಭಾಗವಹಿಸಿಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *