
ಕೊಪ್ಪಳ : ಕೊಪ್ಪಳ ಜಿಲ್ಲಾ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷರಾಗಿ 15 ತಿಂಗಳು ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದು ಕೊಪ್ಪಳ ಜಿಲ್ಲಾ ಪಡಿತರ ವಿತರಕರ ಸಂಘದ ಮಾಜಿ ಅಧ್ಯಕ್ಷ ಹಾಲಯ್ಯ ಹುಡೇಜಾಲಿ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾ ಪಡಿತರ ವಿತರಕರ ಸಂಘದ 15 ತಿಂಗಳು ರಾಜ್ಯಾಧ್ಯಕ್ಷರಾದ ಟಿ.ಕೃಷ್ಣಪ್ಪನವರು, ರಾಜ್ಯ ಕಮಿಟಿಯ ಎಲ್ಲಾ ಸದಸ್ಯರ ಸಲಹೆ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದು, ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರುಗಳು, ಎಲ್ಲಾ ಪದಾಧಿಕಾರಿಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಉಗ್ರಾಹಣದ ವ್ಯವಸ್ಥಾಪಕರು, ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು, ಸಹಕಾರ ಇಲಾಖೆ ಕಾರ್ಯದರ್ಶಿಗಳು ಸಹಕರಿಸಿದ್ದು ಅವರನ್ನು ಅಭಿನಂದಿಸುವುದಾಗಿ, ನಿಮ್ಮೆಲ್ಲರ ಸಹಕಾರ ಇರಲಿ ಎಂದು ತಿಳಿಸಿದ್ದಾರೆ.