
ಕೊಪ್ಪಳ : ರಾಜ್ಯ ಕೆಪಿಸಿಸಿ ಸಂಯೋಜಕ ಡಾ.ಕೆ.ಎಂ.ಸೈಯದ್ ಅವರ ಅಳಿಯ,ಡಾ.ಎಪಿಜಿ ಅಬ್ದುಲ್ ಕಲಾಂ ಸಹಕಾರ ಪತ್ತಿನ ಸಂಘದ ಮಾಜಿ ಉಪಾಧ್ಯಕ್ಷ ಅಜ್ಮೀರ್ ಅಲಿ (45) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ತಾಯಿ, ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ, ನಾಲ್ವರು ಸಹೋದರಿಯರು, ಓರ್ವ ಸಹೋದರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ದಿನಾಂಕ 6-8-2025 ರಂದು ಮಧ್ಯಾಹ್ನ 1 ಗಂಟೆಗೆ ಕೊಪ್ಪಳ ತಾಲೂಕಿನ ಹಳೇ ಬಂಡಿ ಹರ್ಲಾಪುರ ಗ್ರಾಮದ ಮುಸ್ಲಿಂ ಖಬರಸ್ಥಾನದಲ್ಲಿ ಮುಸ್ಲಿಂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ಜರುಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.