
ಸೇವಾ ನಿರತ ಪದವೀಧರ ಶಿಕ್ಷಕರ ಸಮಸ್ಯೆ ಬಗೆಹರಿಸಲು ಮನವಿ
ಕೊಪ್ಪಳ: ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ
ತಕ್ಷಣ ಅನುಮೋದನೆ ನೀಡುವಂತೆ ನಿರ್ದೇಶನ ನೀಡುವ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಪ್ಪಳ ಜಿಲ್ಲಾ ಘಟಕ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸವನಗೌಡ ಪಾಟೀಲ್ ಹಲಿಗೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ. ಬಿ ಗೌರವಾಧ್ಯಕ್ಷ ವೀರಪ್ಪ ಬಳ್ಳೊಳ್ಳಿ, ಉಪಾಧ್ಯಕ್ಷ ಶ್ರೀಕಾಂತ್ ಮಾಸ ಗಟ್ಟಿ, ಗುರುಪಾದಮ್ಮ ಭಂಡಾರಿ, ಖಜಾಂಚಿ ಬಸವರಾಜ್ ಮುಳಗುಂದ, ಸಹ ಕಾರ್ಯದರ್ಶಿಗಳಾದ ಬಸವರಾಜ್ ಕೋಮಲಾಪುರ್, ಪೂರ್ಣಿಮಾ ತುಪ್ಪದ,ಸಂ. ಕಾರ್ಯದರ್ಶಿಗಳಾದ ಪರಶುರಾಮ್ ಗಡ್ಡಿ, ಸುವರ್ಣ ಚೇತನ್, ಜಿಲ್ಲೆಯ ಏಳು ತಾಲೂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.