
ಕೊಪ್ಪಳ : ನಗರದ ಕೆಎಂಎಸ್ ವಾಣಿಜ್ಯ ಸಂಕೀರ್ಣದಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಪತ್ತಿನ ಸೌಹಾರ್ದ ಸಹಕಾರಿ ಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಬ್ಯಾಂಕಿನ ಅಧ್ಯಕ್ಷ ಡಾ.ಕೆ.ಎಂ. ಸೈಯದ್ ಧ್ವಜಾರೋಹಣವನ್ನು ನೆರವೇರಿಸಿ ನಂತರ ಮಾತನಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಅನೇಕ ಮಹನೀಯರನ್ನು ಇಂದು ನಾವು ನೆನೆಯಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಗವಿಸಿದ್ದಪ್ಪ ಆರ್ಯರ, ನಿವೃತ್ತ ಮಿಲಿಟರಿ ಅಧಿಕಾರಿ ರಾಜ್ ಶೆಟ್ಟಿ, ಯುವ ಮುಖಂಡ ರಾಮು ಪೂಜಾರ, ಬ್ಯಾಂಕಿನ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಎ.ನೂರಭಾಷ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.