January 15, 2026
IMG-20260113-WA0048

  ಕೊಪ್ಪಳ :2026ನೇ ಜಿಲ್ಲಾ ಯೋಝಾ ಸಮಿತಿ ಸದಸ್ಯರ ಚುನಾವಣೆಯೂ ಮಂಗಳವಾರ ನಗರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿತು

  ಯೋಜನಾ ಸಮಿತಿಯ ಆರು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳಿಗೆ ಪೈಪೋಟಿ ನಡೆಸಿದ ಬಿಜೆಪಿ ಅಭ್ಯರ್ಥಿಗಳು, ನಾಲ್ಕು ಸ್ಥಾನಗಳಲ್ಲಿ ವಿಜೇತರಾಗಿದ್ದಾರೆ. ಇತ್ತು ಕಾಂಗ್ರೆಸ್ ಪಕ್ಷದಿಂದ ಏಳು ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಇದ್ದು, ಕೇವಲ ಇಬ್ಬರು ಮಾತ್ರ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳಿಗೆ ಒಟ್ಟು 94 ಮತಗಳು ಚಕಾವಣೆಯಾಗಿದ್ದು ಒಂದು ಮತ ಮಾತ್ರ ತಿರಸ್ಕೃತಗೊಂಡಿದೆ. ಇದರಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸೋಮಶೇಖರಪ್ಪ ಭೇರಿಗಿ 51 ಮತಗಳು, ಬಾಲರಾಜ್ ಗಾಳಿ-49 ಮತಗಳು ಪರಶುರಾಮ ನಾಯಕ-46 ಶಿವನಗೌಡ ಪುಂಡಗೌಡರ್ -46 ಮತಗಳನ್ನು ಪಡೆಯುವ ಮೂಲಕ ನಾಲ್ಕು ಬಿಜೆಪಿ ಸ್ಥಾನಗಳನ್ನು ಗಿಟ್ಟಿಸಿಕೊಂಡಿದ್ದಾರೆ.

     ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಅಲೆಯಲ್ಲೂ ಯೋಜನಾ ಸಮಿತಿ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬದಲಾವಣೆ ಗಾಳಿ ಬೀಸಿದೆ, ಮುಂಬರುವ ಸ್ಥಳೀಯ ಚುನಾವಣೆಗೆ ಇದು ದಿಕ್ಸೂಚಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ್ ದಡೇಸೂಗುರು, ಕುಷ್ಟಗಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಎಂಎಲ್ಸಿ ಹೇಮಲತಾ ನಾಯಕ ಹಾಗೂ ಮಾಜಿ ಸಚಿವ ಹಾಲಪ್ಪ ಆಚಾರ್ ಹರ್ಷ ವ್ಯಕ್ತಪಡಿಸಿದ್ದಾರೆ‌.

       ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ್ ದಡೇಸೂಗುರು, ಕುಷ್ಟಗಿ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ಹಾಲಪ್ಪ ಆಚಾರ್,ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಬಿಜೆಪಿ ರಾಜ್ಯ ಕಾರ್ಯಕರಣಿ ಸದಸ್ಯರಾದ ಬಸವರಾಜ್ ಕ್ಯಾವಟರ್, ಬಿಜೆಪಿ ಮುಖಂಡ ಚಂದ್ರಶೇಖರ್ ಪಾಟೀಲ್‌ ಹಲಗೇರಿ, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಹಾಂತೇಶ್ ಮೈನಳ್ಳಿ ಸೇರಿದಂತ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷರಾದ ಗಣೇಶ್ ಹೊರತಟ್ನಾಳ್, ಜಿಲ್ಲಾ ಪ್ರಧಾನಕಾರ್ಯದರ್ಶಿ, ಸುನೀಲ್ ಹೆಸರೂರು, ರಮೇಶ್ ನಾಡಿಗೇರಿ, ನಗರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಲೂರು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಂಬರೀಶ್ ಕುಳಗಿ, ಬಿಜೆಪಿ ಯುವ‌ ಮಖಂಡ ಅಜಯ ಅಗಡಿ, ಕೆ‌ ಮಹೇಶ್ ಸೇರಿಂದತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *