April 18, 2026
IMG_20260121_090015

ಕೊಪ್ಪಳ: ಭಾಗ್ಯನಗರದ ನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ವೃತ್ತದಲ್ಲಿ ಶ್ರೀ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯಮನಪ್ಪ ಕಬ್ಬೇರ್,ಸಮಾಜದ ಮುಖಂಡರು ಪೂಜೆ ಸಲ್ಲಿಸಿ
ಜಯಂತಿ ಆಚರಿಸಿದರು.
ನಂತರ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯಮನಪ್ಪ ಕಬ್ಬೇರ್ ಮಾತನಾಡಿ ನಿಜಶರಣ ಶ್ರೀಅಂಬಿಗರ ಚೌಡಯ್ಯನವರು ತಮ್ಮ ಕಾಯಕದ ಮೂಲಕ ಅವರು ನಿಜ ಶರಣರಾಗಿದ್ದರು. ಅವರು ತಮ್ಮ ವಚನಗಳ ಮೂಲಕ ಸಮಾಜದ ಅಂಕು- ಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದರು, ಪ್ರತಿಯೊಬ್ಬರು ಅವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
    ಈ ಸಂದರ್ಭದಲ್ಲಿ ಮುಖಂಡರಾದ ಗಂಗಾಧರ್ ಕಬ್ಬೇರ್,ಯಂಕಪ್ಪ ಬಾರಕೇರ ಸೇರಿದಂತೆ ಭಾಗ್ಯನಗರದ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *